![](https://pragativahini.com/wp-content/uploads/2025/02/IMG_20250206_131103_650_x_350_pixel.jpg)
ಪ್ರಗತಿವಾಹಿನಿ ಸುದ್ದಿ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಗುರುವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು ಕೃಷ್ಣಯ್ಯ ಶೆಟ್ಟಿ ತಪ್ಪಿತಸ್ಥ ಎಂದು ತೀರ್ಪು ಪ್ರಕಟಿಸಿದೆ.
ಕೃಷ್ಣಯ್ಯ ಶೆಟ್ಟಿಗೆ ಶಿಕ್ಷೆ ಪ್ರಮಾಣ ವನ್ನು ಒಂದೆರೆಡು ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ನಕಲಿ ದಾಖಲೆಗಳ ಮೂಲಕ 7.17 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದ ಮೇಲೆ ಶಿಕ್ಷೆ ವಿಧಿಸಲಾಗಿದೆ.
1993ರಲ್ಲಿ ಕೃಷ್ಣಯ್ಯ ಶೆಟ್ಟಿ ಮಾಲೀಕತ್ವದ ಬಾಲಾಜಿಕೃಪಾ ಎಂಟರ್‌ಪ್ರೈಸಸ್ ಮೂಲಕ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ ಸಾಲ ಕೊಡಿಸುವ ಭರವಸೆ ನೀಡಿ ವಂಚಿಸಿದ್ದರು.
ಸಾವರ್ಬಿಜನಿಕ ಉದ್ದಿಮೆಗಳಾದ ಟಿಎಸ್, ಕೆಎಸ್‌ಆರ್‌ಟಿಸಿ, ಬಿಎಸ್‌ಎನ್‌ಎಲ್, ಐಟಿಐ, ಎಚ್‌ಎಎಲ್, ಬಿಇಎಂಎಲ್, ಎಡಿಇ ಸಂಸ್ಥೆಗಳ 181 ಮಂದಿಗೆ 7.17 ಕೋಟಿ ರೂ.ಬ್ಯಾಂಕ್ ಸಾಲವನ್ನು ನಕಲಿ ದಾಖಲೆ ಸೃಷ್ಟಿಸಿ ಪಡೆದ ಆರೋಪ ಹೊತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3.53 ಕೋಟಿ ರೂಪಾಯಿ ಸಾಲ ಮರುಪಾವತಿಸಿಲ್ಲ ಎಂದು ಆರೋಪಿಸಿ ಅಂದಿನ ಮುಖ್ಯ ವಿಚಕ್ಷಣಾ ದಳದ ಮುಖ್ಯಸ್ಥ ಆರ್.ಡಿ.ನಾಯ್ಡು ನೀಡಿರುವ ದೂರು ನೀಡಿದ್ದರು. ಈ ದೂರಿನನ್ವಯ ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು.ಬ್ಯಾಂಕ್ ಖಾತೆಗಳು, ಸಾಲ ವಿತರಣೆಯಾದ ಮಾಹಿತಿ ಕಲೆ ಹಾಕಿ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ