ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಅಲ್ಪಕಾಲದ ಅನಾರೋಗ್ಯದಿಂದಾಗಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.
ಧಾರವಾಡ ಜಿಲ್ಲೆ ಕಲಘಟಗಿ ಕ್ಷೇತ್ರದ ಶಾಸಕಾರಾಗಿದ್ದ ಅವರು ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದರು. 2018 ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅವರಿಗೆ ವಯಸ್ಸಿನ ಕಾರಣದಿಂದ ಟಿಕೆಟ್ ನಿರಾಕರಿಸಲಾಗಿತ್ತು. ನನಗಿನ್ನೂ ವಯಸ್ಸಾಗಿಲ್ಲ, ನಿಮ್ಮ ಹಾಗೆ ಪಕ್ಷ ಕಟ್ಟಿದ್ದೇನೆ ಎಂದು ಪಕ್ಷದ ಸ್ಥಳೀಯ ನಾಯಕರ ವಿರುದ್ಧ ಕಿಡಿಕಾರಿದ್ದರು.
ಶಿಕ್ಷಕರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದ ನಿಂಬಣ್ಣವರ್ 1995ರಲ್ಲಿ ಸ್ವಯಂ ನಿವೃತ್ತಿ ಪಡೆದು ಸಕ್ರೀಯ ರಾಜಕೀಯಕ್ಕಿಳಿದಿದ್ದರು. ವಕೀಲರಾಗಿ ಕೂಡ ಅವರು ಹಲವು ವರ್ಷ ಕೆಲಸ ನಿರ್ವಹಿಸಿದ್ದರು. ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ