ಪ್ರಗತಿವಾಹಿನಿ ಸುದ್ದಿ, ಧಾರವಾಡ: ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಶಿವಾನಂದ ರುದ್ರಪ್ಪಾ ಅಂಬಡಗಟ್ಟಿ (68) ಹೃದಯಾಘಾತದಿಂದ ಇಂದು ನಿಧನರಾದರು.
ಸ್ವತಃ ಕೃಷಿಕ ವೃತ್ತಿಯಿಂದ ಬಂದಿದ್ದ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದು ನಿಂದ ಶಾಸಕರಾಗಿದ್ದರು. ಅವರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಎಸ್.ಎಂ. ಕೃಷ್ಣ ಅವರ ಸರಕಾರವಿದ್ದಾಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ನಂತರ ಜೆಡಿಎಸ್ ನೊಂದಿಗೆ ಗುರುತಿಸಿಕೊಂಡಿದ್ದ ಅವರು ಇತ್ತೀಚೆಗಷ್ಟೇ ಮತ್ತೆ ಕಾಂಗ್ರೆಸ್ ಸೇರಿದ್ದರು.
ಕುಟುಂಬದ ಮೂಲಗಳ ಪ್ರಕಾರ ಅವರ ಅಂತ್ಯಸಂಸ್ಕಾರವನ್ನು ಸ್ವಂತ ಊರಾದ ಕಲಘಟಗಿಯಲ್ಲಿ ಇಂದು ಸಂಜೆ ನೆರವೇರಿಸಲಾಗುತ್ತಿದೆ.
ಸಿಎಂ ಸಂತಾಪ:
ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು ಎಂದು ಸಿಎಂ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಡಿ.ಕೆ. ಶಿವಕುಮಾರ್ ಸಂತಾಪ:
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
‘ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಶಾಸಕರಾದ ಶಿವಾನಂದ ಅಂಬಡಗಟ್ಟಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದರೂ ನಂತರ ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು. ಧಾರವಾಡ ಜಿಲ್ಲೆಯ ಪಕ್ಷ ಸಂಘಟನೆಯಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು. ಕಾಂಗ್ರೆಸ್ ಪಕ್ಷ ಜಿಲ್ಲೆಯ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ಇವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಕೊಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅಂಬಡಗಟ್ಟಿ ಅವರ ನಿಧನಕ್ಕೆ ಸಚಿವರು, ಶಾಸಕರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
*ಸಿಬಿಐಗೆ ಪತ್ರ ಬರೆಯುತ್ತೇನೆ ಎಂದ ಡಿ.ಕೆ.ಶಿವಕುಮಾರ್*
https://pragati.taskdun.com/d-k-shivakumarramesh-jarakiholireactionshivamogga/
ಹೊಸ ಟ್ರಾಫಿಕ್ ಫೈನ್ ಡಿಸ್ಕೌಂಟ್ ಯೋಜನೆಯಲ್ಲಿ ವಂಚನೆ: ಪೊಲೀಸರಿಂದ ಎಚ್ಚರಿಕೆ
https://pragati.taskdun.com/fraud-in-new-traffic-fine-discount-scheme-warning-from-police/
*ಕಬಡ್ಡಿ ಆಡುವಾಗಲೇ ಹೃದಯಾಘಾತ; ವಿದ್ಯಾರ್ಥಿನಿ ದುರ್ಮರಣ*
https://pragati.taskdun.com/kabaddistudentheart-attackdeathbangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ