Politics

*ಮಾಜಿ ಶಾಸಕ ವೆಂಕಟರೆಡ್ಡಿ ಮುನ್ನಾಳ  ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಯಾದಗಿರಿಯ ಮಾಜಿ ಶಾಸಕ ವೆಂಕಟರೆಡ್ಡಿ ಮುನ್ನಾಳ (71) ಅವರು ಇಂದು ಅನಾರೋಗ್ಯದಿಂದಾಗಿ ಬೆಂಗಳೂರಿನ ಹೆಚ್‌ಸಿಜಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

2018 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನ್ನಾಳ ಅವರು ಯಾದಗಿರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸೋತಿದ್ದರು.

ಮುನ್ನಾಳ ಅವರ ಪಾರ್ಥಿವ ಶರೀರ ಇಂದು ರಾತ್ರಿ ಯಾದಗಿರಿಗೆ ತರಲಾಗುತ್ತಿದೆ. ಬುಧವಾರ ಸಂಜೆ ಯಾದಗಿರಿ ತಾಲೂಕಿನ ಅವರ ಸ್ವ ಗ್ರಾಮದ ಮುನ್ನಾಳ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮಾಜಿ ಸಚಿವ ದಿ. ವಿಶ್ವನಾಥರೆಡ್ಡಿ ಮುನ್ನಾಳ ಅವರ ಪುತ್ರ ವೆಂಕಟರೆಡ್ಡಿ ಮುನ್ನಾಳ 1995 ರಲ್ಲಿ ಯಾದಗಿರಿ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Home add -Advt

Related Articles

Back to top button