ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ: ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬೈಲಹೊಂಗಲ ಮಾಜಿ ಶಾಸಕ ವಿಶ್ವನಾಥ ಪಾಟೀಲ ಅವರು ಬಿಜೆಪಿಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆಂದು ಅವರ ಆಪ್ತ ಮೂಲಗಳು ತಿಳಿಸಿದ್ದು, ಪಕ್ಷೇತರರಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆನ್ನಲಾಗಿದೆ.
ಬೈಲಹೊಂಗಲದಲ್ಲಿ ಅಭಿಮಾನಿಗಳ ಸಭೆ ಹಾಗೂ ಪತ್ರಿಕಾಗೋಷ್ಠಿ ಕರೆದಿರುವ ಅವರು ತಮ್ಮ ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ. ಬಿಜೆಪಿಗೆ ರಾಜಿನಾಮೆ ನೀಡಿ ಪಕ್ಷೇತರನಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬೆಳಗ್ಗೆಯಿಂದಲೇ ಅವರ ಅಭಿಮಾನಿಗಳ ಸಭೆ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ