Kannada NewsKarnataka NewsPolitics
*ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ (90) ಅವರು ಇಂದು (ಶನಿವಾರ, ಫೆಬ್ರವರಿ 7, 2026) ಮುಂಜಾನೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಇಂದು ಬೆಳಿಗ್ಗೆ ದಾವಣಗೆರೆಯ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು. ಇಂದು ಸಂಜೆ 4 ಗಂಟೆಗೆ ಹದಡಿ ರಸ್ತೆಯಲ್ಲಿರುವ ಯಜಮಾನ್ ಮೋತಿ ದೊಡ್ಡಪ್ಪ ಟ್ರಸ್ಟ್ ನಿವೇಶನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ದಾವಣಗೆರೆಯ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಅವರ ‘ಮಾತೆ ಗೌರಿ’ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ.
ದಾವಣಗೆರೆ ಜಿಲ್ಲೆಯ ಪ್ರಭಾವಿ ನಾಯಕರಾಗಿದ್ದ ಇವರು ತಮ್ಮ ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದರು. ಇವರ ನಿಧನಕ್ಕೆ ವಿವಿಧ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.




