Latest

2ನೇ ಹಂತದ ಗ್ರಾಪಂ ಚುನಾವಣೆ: 216 ಸ್ಥಾನ ಖಾಲಿ; ಕಣದಲ್ಲಿ 1,05,431 ಅಭ್ಯರ್ಥಿಗಳು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇದೇ 27ರಂದು ನಡೆಯಲಿರುವ 2ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 1,05,431 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಒಟ್ಟೂ 109 ತಾಲೂಕುಗಳಲ್ಲಿ 2ನೇ ಹಂತದ ಚುನಾವಣೆ ನಡೆಯಲಿದೆ. 2709 ಗ್ರಾಮ ಪಂಚಾಯಿತಿಗಳ 43291 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. 216 ಸ್ಥಾನಗಳಿಗೆ ಯಾರೂ ನಾಮಪತ್ರ ಸಲ್ಲಿಸಿಲ್ಲ. 1,47,649 ಜನರು ನಾಮಪತ್ರ ಸಲ್ಲಿಸಿದ್ದರು. 1,39,546 ನಾಮಪತ್ರಗಳು ಕ್ರಮಬದ್ಧವಾಗಿದ್ದವು.

Home add -Advt

34115 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ. 3,697 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 39,378 ಸ್ಥಾನಗಳಿಗೆ ಅಂತಿಮವಾಗಿ ಚುನಾವಣೆ ನಡೆಯುವುದು.

ಸಂಪೂರ್ಣ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ20201222104114439

Related Articles

Back to top button