Cancer Hospital 2
Beereshwara 36
LaxmiTai 5

*ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಇನ್ನಿಲ್ಲ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಕಲಬುರ್ಗಿ ನಗರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ತಡರಾತ್ರಿ 1 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

Emergency Service

ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದ ಇಕ್ಬಾಲ್ ಅಹ್ಮದ್ ಅವರ ನಿಧನಕ್ಕೆ ರಾಜಕೀಯ ಗಣ್ಯರು ಕಂಪನಿ ಮಿಡಿದಿದ್ದಾರೆ.

ಎರಡು ಬಾರಿ ಸಂಸದರಾಗಿ, ಒಂದು ಬಾರಿ ಎಂ ಎಲ್ ಸಿಯಾಗಿ ಆಯ್ಕೆಯಾಗಿದ್ದರು. 2009ರಲ್ಲಿ ಕಲಬುರ್ಗಿ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಬಳಿಕ ಮಲ್ಲಿಕಾರ್ಜುನ ಖರ್ಗೆಯವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಇಂದು ಸಂಜೆ 6 ಗಂಟೆಗೆ ಕಲಬುರ್ಗಿಯಲ್ಲಿ ಇಕ್ಬಾಲ್ ಅಹ್ಮದ್ ಸರಡಗಿ ಅಂತ್ಯಕ್ರಿಯೆ ನಡೆಯಲಿದೆ.


Bottom Add3
Bottom Ad 2