ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯ ಸುಧಾರಿಸಿದ್ದು, ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ ಎಂದು ಏಮ್ಸ್​ ಆಸ್ಪತ್ರೆ ಮೂಲಗಳು ತಿಳಿಸಿವೆ.

ಡಾ.ಮನಮೋಹನ್ ಸಿಂಗ್ ಅವರಿಗೆ ನಿನ್ನೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಇವರಿಗೆ ವಿಶೇಷ ವಾರ್ಡ್​​ನಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಸಿಂಗ್​​ ಆರೋಗ್ಯ ಸುಧಾರಣೆ ಕಂಡಿದೆ ಎಂದು ಹೇಳಿದ್ಧಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡಾ. ಮನಮೋಹನ್​​ ಸಿಂಗ್​​ ಅವರಿಗೆ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಡಾ ನಿತೀಶ್ ನಾಯ್ಕ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿದು ಬಂದಿತ್ತು. 2009ರಲ್ಲಿ ಡಾ. ಸಿಂಗ್​​ಗೆ ಏಮ್ಸ್​​ನಲ್ಲೇ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button