Latest

ಮಾಜಿ ರಾಷ್ಟ್ರಪತಿ ಆರೋಗ್ಯ ಗಂಭೀರ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಹಿನ್ನೆಲೆಯಲ್ಲಿ ಮಾಜಿ ರಾಷ್ಟ್ರಪತಿಯವರಿಗೆ ದೆಹಲಿಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಆದರೂ ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದೆ.

ನಿನ್ನೆ ಮಧ್ಯಾಹ್ನ ಟ್ವೀಟ್ ಮಾಡಿದ್ದ ಪ್ರಣಬ್ ಮುಖರ್ಜಿ, ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದು, ವರದಿ ಪಾಸಿಟಿವ್ ಎಂದು ಬಂದಿದೆ ಎಂದು ತಿಳಿಸಿದ್ದರು.

Home add -Advt

Related Articles

Back to top button