*ಸಿಎಂ ಸಿದ್ದರಾಮಯ್ಯ ವಿರುದ್ಧ ಪೋಸ್ಟ್ ಹಾಕಿದ್ದ ಮಾಜಿ ಯೋಧ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ನಿವೃತ್ತ ಯೋಧನನ್ನು ಬೆಂಗಳೂರಿನ ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಸಂತ್ ಕುಮಾರ್ (40) ಬಂಧಿತ ಆರೋಪಿ. ಸಕಲೇಶಪುರದ ವಸಂತ್ ಕುಮಾರ್ ನಿವೃತ್ತಿ ಬಳಿಕ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನ ಕನ್ನಡ ಬರುತ್ತ ಎಂದು ಸಿಎಂ ಸಿದ್ದರಾಮಯ್ಯ ಕೇಳಿದ್ದರು. ಇದಕ್ಕೆ ಹನುಮ ಭಕ್ತ ಅನ್ನೋ ಫೇಸ್‌ಬುಕ್ ಪೇಜ್‌ನಲ್ಲಿ ಸಿಎಂ ಅವರನ್ನು ನಿಂದಿಸಿ ವಸಂತ್ ಕುಮಾರ್ ಪೋಸ್ಟ್ ಹಾಕಿದ್ದ. ಸಿಎಂ ಕುರಿತು … Continue reading *ಸಿಎಂ ಸಿದ್ದರಾಮಯ್ಯ ವಿರುದ್ಧ ಪೋಸ್ಟ್ ಹಾಕಿದ್ದ ಮಾಜಿ ಯೋಧ ಅರೆಸ್ಟ್*