Latest

*ಮಾಜಿ ಸಭಾಪತಿ ನಿಧನ: ಕಲಬುರಗಿಯಲ್ಲಿ ಇಂದು ಅಂತ್ಯಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಡೇವಿಡ್ ಸಿಮಿಯೋನ್ (75) ಅವರು ಮಂಗಳವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರರು ಹಾಗೂ ಒಡನಾಡಿಗಳನ್ನು ಅಗಲಿದ್ದಾರೆ.

Home add -Advt

ಬೆಳಗ್ಗೆ ರಿಚ್ಯಂಡ್ ಟೌನ್ ಬಳಿಯ ಮೆಥೋಡಿಸ್ಟ್ ಚರ್ಚ್‌ನಲ್ಲಿ ಕಳೆಬರಹದ ಅಂತಿಮ ವಿಧಿವಿಧಾನದ ಪ್ರಕ್ರಿಯೆಗಳು ನಡೆದವು. ಜತೆಗೆ ಇಲ್ಲೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನಂತರ ಬೆಂಗಳೂರಿನಿಂದ ಕಲಬುರಗಿಗೆ ಕಳೆಬರಹ ತೆಗೆದುಕೊಂಡು ಹೋಗಲಾಯಿತು. ಬುಧವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹೇಳಿವೆ.

ಅವರು 1996ರಿಂದ 2002ರವರೆಗೆ ಪರಿಷತ್ತಿನ ಉಪಸಭಾಪತಿಯಾಗಿ ಹಾಗೂ ಹಂಗಾಮಿ ಸಭಾಪತಿಯಾಗಿ ಸದನವನ್ನು ನಿರ್ವಹಿಸಿದ್ದರು.

ಡೇವಿಡ್ ಸಿಮಿಯೋನ್ ಅವರ ಅಗಲಿಕೆಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Related Articles

Back to top button