Belagavi NewsBelgaum NewsKannada NewsKarnataka NewsPolitics

*ಸಚಿವ ಸತೀಶ್ ಜಾರಕಿಹೊಳಿಗೆ ಪರೋಕ್ಷವಾಗಿ ಟಾಂಗ್ ಕೋಟ್ಟ ಮಾಜಿ ಶಾಸಕ ಅನಿಲ ಬೆನಕೆ*

ಪ್ರಗತಿವಾಹಿನಿ ಸುದ್ದಿ: ಸಂವಿಧಾನದ ವಿರುದ್ಧವಾಗಿ ಕೆಲಸ ಮಾಡಿದ್ದು ಕಾಂಗ್ರೆಸ್. ಮಾಜಿ ಪ್ರಧಾನಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ತಂದು ದೇಶದ ಜನರ‌ ಮೇಲೆ ಗಾಯ ಮಾಡಿದ್ದರು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಹೇಳಿದರು.

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ದೇಶದ ಜನರ ಕ್ಷಮೆ‌ ಕೇಳಬೇಕು. ದೇಶದಲ್ಲಿ ತುರ್ತು ಪರಿಸ್ಥಿತಿ ತಂದಾಗ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿತ್ತು. ಅಲ್ಲದೆ, ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಈ‌ ಹಿಂದಿನ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದರು. ಈಗ ಅವರು ಮಾತನಾಡುತ್ತಿಲ್ಲ ಎಂದರು.

ನನ್ನ ಅವಧಿಯಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರವನ್ನು ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಬೆಳಗಾವಿ ಉತ್ತರ ಕ್ಷೇತ್ರ ಖಸಾಯಿ ಖಾನೆ ಮಾಡಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದ ಅವರು, ಬಹುತೇಕ ಜನಪ್ರತಿನಿಧಿಗಳು ಉತ್ತರ ಕ್ಷೇತ್ರದಲ್ಲಿ ಇದ್ದಾರೆ. ಅಂದರೆ ಅದು ಖಸಾಯಿ ಖಾನೆನಾ ಎಂದು ಪ್ರಶ್ನಿಸಿದರು.

ಇನ್ನೂ ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಬೆಳಗಾವಿ ರೈಲ್ವೆ ‌ನಿಲ್ದಾಣದಲ್ಲಿ ಶಿವಾಜಿ ಮೂರ್ತಿ ಸ್ಥಾಪನೆ ಮಾಡುವಂತೆ ಮನವಿ ಮಾಡಿದ್ದು ನಿಜಾ. ಅದರ ಜೊತೆಗೆ ಈಗಾಗಲೇ ಇಲ್ಲಿ ಕೆಲ ಮಹಾನ್ ಪುರುಷರ ಮೂರ್ತಿಗಳಿವೆ ಅವುಗಳನ್ನು ಲೋಕಾರ್ಪಣೆ ‌ಮಾಡಿ ಎಂದಿದ್ದೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button