Latest

ಮಧ್ಯಾಹ್ನ 2 ಗಂಟೆಗೆ ಮುತ್ತಪ್ಪ ರೈ ಅಂತ್ಯಕ್ರಿಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ತೀವ್ರ ಅನಾರೋಗ್ಯದಿಂದ ಇಂದು ನಸುಕಿನ ಜಾವ ಸಾವನ್ನಪ್ಪಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರೂ ಆಗಿರುವ ಮುತ್ತಪ್ಪ ರೈ ಕ್ಯಾನ್ಸರ್ ನಿಂದ ಬಳಲುತಿದ್ದರು. ಕೆಲವು ದಿನದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಡು ದಿನಗಳಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರು, ಇಂದು ಮುಂಜಾನೆ 2 ಗಂಟೆಗೆ ವೇಳೆಗೆ ಕೊನೆಯುಸಿರು ಎಳೆದರು.

ಅವರಿಗೆ ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಒಬ್ಬ ಸಹೋದರಿ ಇದ್ದಾರೆ. ರಾಮನಗರ ತಾಲೂಕಿನ ಬಿಡದಿಯಲ್ಲಿ ಇರುವ ಅವರ ಸ್ವಗೃಹದಲ್ಲಿ ಕೆಲವೇ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಲಾಕ್ ಡೌನ್ ಇರುವುದರಿಂದ ಸಾರ್ವಜನಿಕರಿಗೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಇಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

ಮುತ್ತಪ್ಪ ರೈ ಹಿರಿಯ ಪುತ್ರ ರಾಕಿ ಸದ್ಯ ಕೆನಡಾದಲ್ಲಿ ಇದ್ದಾರೆ. ಕೋವಿಡ್-19 ಲಾಕ್ ಡೌನ್ ನಿಂದ ವಿಮಾನ ಸಂಚಾರ ರದ್ದಾಗಿದ್ದು, ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ‌ ಕಡಿಮೆ. ಹೀಗಾಗಿ‌ ಕಿರಿಯ ಪುತ್ರ ರಿಕ್ತಿ ತಂದೆಯ ಅಂತಿಮ‌ ಸಂಸ್ಕಾರ ನೆರವೇರಿಸಲಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button