ಪ್ರಗತಿವಾಹಿನಿ ಸುದ್ದಿ, ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
1941, ಮಾರ್ಚ್ 27ರಂದು ಆಸ್ಕರ್ ಫರ್ನಾಂಡಿಸ್ ಉಡುಪಿಯಲ್ಲಿ ಜನಿಸಿದ್ದರು. 1980ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು. 4 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಕಾರ್ಮಿಕ ಸಚಿವರಾಗಿ ಕಾರನಿರ್ವಹಿಸಿದ್ದರು.
ಗಾಂಧಿ ಕುಟುಂಬಕ್ಕೆ ತೀರಾ ಹತ್ತಿರವಾಗಿದ್ದ ಅವರು ಕಾಂಗ್ರೆಸ್ ನ ಪ್ರಮುಖ ನಿರ್ಧಾರಗಳಲ್ಲಿ ಮುಂಚೂಣಿ ಪಾತ್ರ ವಹಿಸುತ್ತಿದ್ದರು.
ಎತ್ತಿನಗಾಡಿಯಿಂದ ಆಯತಪ್ಪಿ ಬಿದ್ದ ಕಾಂಗ್ರೆಸ್ ಶಾಸಕರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ