ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರೀಯ ಜನತಾದಳ(ಆರ್ ಜೆಡಿ) ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ (74) ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ರಘುವಂಶ್ ಪ್ರಸಾದ್, ಇತ್ತೀಚೆಗೆ ಗುಣಮುಖರಾಗಿದ್ದರು. ಆದರೆ ಅವರ ಆರೋಗ್ಯದಲ್ಲಿ ಹಲವು ಸಮಸ್ಯೆಗಳಿದ್ದುದರಿಂದಾಗಿ ಪಾಟ್ನಾದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ತಡ ರಾತ್ರಿ ಅವರ ಆರೋಗ್ಯ ಬಿಗಡಾಯಿಸಿದ ಹಿನ್ನಲೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ರಘುವಂಶ್ ಪ್ರಸಾದ್ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
5 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ರಘುವಂಶ್ ಪ್ರಸಾದ್, ಯುಪಿಎ 1ರಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ನರೇಗಾ ಯೋಜನೆ ಸಮರ್ಥವಾಗಿ ಜಾರಿಗೊಳಿಸಿದ್ದರು.
ತೀವ್ರ ಅನಾರೋಗ್ಯ ಹಿನ್ನಲೆಯಲ್ಲಿ ರಘುವಂಶ್ ಪ್ರಸಾದ್ ಅವರು, ಸೆ.10ರಂದು ತಾವು ಆರ್ ಜೆಡಿ ಪಕ್ಷ ತೊರೆಯುತ್ತಿರುವುದಾಗಿ ಲಾಲು ಪ್ರಸಾದ್ ಯಾದವ್ ಅವರಿಗೆ ಪತ್ರ ಬರೆದಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ