ಪ್ರಗತಿವಾಹಿನಿ ಸುದ್ದಿ: ಅಮೆರಿಕಾದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರು ಜಾರ್ಜಿಯಾದ ಪ್ಲೇನ್ಸ್‌ನಲ್ಲಿರುವ ಅವರ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು.
ಜಿಮ್ಮಿ ಕಾರ್ಟರ್ ಅವರು 1977ರಿಂದ 1981ರವರೆಗೆ ಅಮೆರಿಕದ 39ನೇ ಅಧ್ಯಕ್ಷರಾಗಿದ್ದರು. ಜಾರ್ಜಿಯಾದ ಪ್ಲೇನ್ಸ್‌ನಲ್ಲಿರುವ ಅವರ ಮನೆಯಲ್ಲಿ ಕಾರ್ಟರ್ ನಿಧನರಾದರು ಎಂದು ಕಾರ್ಟರ್ ಸೆಂಟರ್ ತಿಳಿಸಿದೆ.
ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್. ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟ‌್ರಪುರಿ ಎಂದು ಹೆಸರಿಡಲಾಗಿತ್ತು. ಅವರಿಗೆ 2002ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ