Latest

ರೈತರಿಂದ ಬಾರುಕೋಲು ಚಳುವಳಿ; ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಜ್ಜು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದ್ದು, ಇಂದು ಅನ್ನದಾತರು ಬಾರುಕೋಲು ಚಳುವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ರಾಜಧಾನಿ ಬೆಂಗಳೂರಿನಲ್ಲಿ ಮೂರು ಸಾವಿರಕ್ಕೂ ಹೆಚ್ಚು ರೈತರು ಬಾರುಕೋಲು ಚಳುವಳಿ ನಡೆಸುತ್ತಿದ್ದು, ರೈತರ ಹೋರಾಟಕ್ಕೆ ಕನ್ನಡಪರ ಸಂಘಟನೆಗಳು ಕೂಡ ಕೈ ಜೋಡಿಸಿವೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಮೆಜಸ್ಟಿಕ್ ರೈಲ್ವೆ ನಿಲ್ದಾಣದಿಂದ ಆನಂದ್ ರಾವ್ ಸರ್ಕಲ್ ಮೂಲಕ ಆಗಮಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.

Home add -Advt

ಇದೇ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾಲ್ನಡಿಗೆ ಜಾಥಾ ನಡೆಸುತ್ತಿದ್ದು, ಈ ಮೂಲಕ ರಾಜಭವನಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು, ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದಾರೆ.

Related Articles

Back to top button