ಪ್ರಗತಿವಾಹಿನಿ ಸುದ್ದಿ, ಮಾಂಜರಿ:
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡದ ಶಿಲಾನ್ಯಾಸ ಸಮಾರಂಭವು ಶನಿವಾರ ನಡೆಯಲಿದೆ.
ರಾಜ್ಯಸಭಾ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ ಪ್ರಭಾಕರ ಕೋರೆ ಅವರ ವಿಶೇಷ ಪ್ರಯತ್ನದಿಂದ ಆಸ್ಪತ್ರೆ ಮಂಜೂರಾಗಿದೆ.
ಶನಿವಾರ ಸಂಜೆ 4 ಗಂಟೆಗೆ ನಡೆಯುವ ಈ ಕಾರ್ಯಕ್ರಮಕ್ಕೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಆರೋಗ್ಯ ಸಚಿವ ಶಿವಾನಂದ ಪಾಟೀಲ ಹಾಗೂ ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನಪರಿಷತ್ತಿನ ಸದಸ್ಯರು, ಲೋಕಸಭಾ ಸದಸ್ಯರು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಯ ಸದಸ್ಯರು ಆಹ್ವಾನಿತರಾಗಿದ್ದಾರೆ.