Kannada NewsLatest

ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಚಾಕು ಇರಿದು ಯುವಕನ ಹತ್ಯೆ

ಪ್ರಗತಿವಾಹಿನಿ, ಬೆಳಗಾವಿ: ಬೆಳಗಾವಿ ಜಿಲ್ಲೆ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ಮುಗಳಿಹಾಳದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿ ವೇಳೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆಗೈಯ್ಯಲಾಗಿದೆ.

ಅರ್ಜುನ ಗೌಡ (21) ಚಾಕು ಇರಿತದಿಂದ ಮೃತಪಟ್ಟ ಯುವಕ. ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ವ್ಯಕ್ತಿಯೋರ್ವ ಅರ್ಜುನ ಗೌಡ ಎಂಬ ಯುವಕನಿಗೆ ಚಾಕು ಇರಿದಿದ್ದಾನೆ.

ಅರ್ಜುನ ಗೌಡ ಎದೆಯ ಭಾಗಕ್ಕೆ ಚಾಕು ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡ ಯುವಕ ಕೆಳಗೆ ಕುಸಿದು ಬೀಳುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಅರ್ಜುನ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯ ಭಂದ್ರೊಳಿ ( 21) , ಸುಭಾಸ ಸೊಲನ್ನವರ್ ( 21) , ವಿಠ್ಠಲ ಮೀಶಿ ( 20) ಹಾಗೂ ಇನ್ನೋರ್ವ ಬಾಲಾಪರಾಧಿ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಹಳೆ ವೈಷಮ್ಯ ಕಾರಣ ಎನ್ನಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.

Home add -Advt

ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ವರುಣಾರ್ಭಟ; ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

https://pragati.taskdun.com/latest/karawali-district4-daysrainkarnataka-rain-update/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button