CrimeKannada NewsKarnataka NewsLatestTravel

*ಬೆಂಗಳೂರು-ಮೈಸೂರು ಎಕ್ಸೆಸ್ ವೇ ನಲ್ಲಿ ಭೀಕರ ಅಪಘಾತ: ನಾಲ್ವರ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳಗಿನ ಜಾವ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಬೆಂಗಳೂರು-ಮೈಸೂರು ಎಕ್ಸೆಸ್ ವೇ ನಲ್ಲಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆದಿದೆ. 

Home add -Advt

ಕೇರಳದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಪ್ರಯಾಣಿಕರ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೆ ಡಿಕ್ಕಿ ಹೊಡೆದಿದೆ. ಅಪಘಾತಕ್ಕೀಡಾದ ಖಾಸಗಿ ಪ್ರಯಾಣಿಕರ ಬಸ್‌ನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಮೃತರನ್ನು ಕೋಳಿಕೋಡು ಮೂಲದ ಮೊಹಮ್ಮದ್ ಫರಾನ್ (22), ಸುಲ್ಪಿ (45), ಕಲಾಸಿಪಾಳ್ಯ ನಿವಾಸಿ ರಶೀದ್ (45) ಹಾಗೂ ಆಡುಗೋಡಿ ಸಮೀಪದ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಎಂದು ಗುರುತಿಸಲಾಗಿದೆ.

ಇದೇ ವೇಳೆ ಕಣ್ಣೂರು ಮೂಲದ ಅಬ್ದುಲ್ ಮತ್ತು ಅಲೇನ್ ಅವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಚಾಲಕನಿಗೆ ನಿದ್ರೆ ಮಂಪರು ಬಂದಿರುವ ಕಾರಣ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತರ ಗುರುತು ಪತ್ತೆ ಹಾಗೂ ದುರಂತದ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.

Related Articles

Back to top button