Kannada NewsKarnataka NewsNational
*ಒಂದೆ ಕುಟುಂಬದ ನಾಲ್ವರ ಸಂಶಯಾಸ್ಪದ ಸಾವು, ಆತ್ಮಹತ್ಯೆ ಶಂಕೆ : ಬೆಚ್ಚಿಬಿದ್ದ ಜನ*

ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಮೈಸೂರಿನ ವಿಶ್ವೇಶ್ವರಯ್ಯ ನಗರದಲ್ಲಿ ಈ ಘಟನೆ ನಡೆದಿದ್ದು, ಚೇತನ್ ಹಾಗೂ ರೂಪಾಲಿ ಗಂಡ, ಹೆಂಡತಿ, ಇವರ ಜೊತೆಗೆ ವೃದ್ಧೆ ಮತ್ತು ಮಗು ದೇಹ ಕೂಡ ಮನೆಯಲ್ಲಿ ಪತ್ತೆಯಾಗಿದೆ.
ಆತ್ಮಹತ್ಯೆಗೆ ಮೊದಲೇ ಪ್ಲಾನ್ ಮಾಡಿಕೊಂಡಿದ್ದ ಚೇತನ್, ಮೂವರಿಗೆ ವಿಷ ನೀಡಿ, ಆ ನಂತರ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಶವ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ