Kannada NewsKarnataka NewsLatest

*ಮಳೆಗೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಗುರುವಾರ ರಾತ್ರಿ ಸುರಿದ ಮಳೆ ಮತ್ತು ಗಾಳಿಗೆ ಮನೆಯೊಂದರ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. 

ವಿಜಯಪುರ ಜಿಲ್ಲೆಯಲ್ಲಿ ಆಲಮೇಲ ತಾಲೂಕಿನ ಮೊರಗಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಗುರುನಾಥ ಬಡಿಗೇರ (35), ಅವರ ಪತ್ನಿ ಜ್ಯೋತಿ ಬಡಿಗೇರು (28) ಹಾಗೂ ಇಬ್ಬರು ಪುಟ್ಟ ಮಕ್ಕಳಾದ ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ. 

ಕುಟುಂಬದವರು ತಮ್ಮ ಸ್ವಂತ ಮನೆಯ ದುರಸ್ತಿ ಕಾರ್ಯವನ್ನು ಕೈಗೊಂಡಿದ್ದರು. ಆ ಕೆಲಸ ಮುಗಿಯುವವರೆಗೆ ತಾತ್ಕಾಲಿಕವಾಗಿ ಈ ಹಳೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆದರೆ ಗಾಳಿ ಸಹಿತ ಸುರಿದ ಮಳೆಗೆ ಹಳೆಯ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದ್ದರಿಂದ ಯಾರಿಗೂ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಮಣ್ಣಿನಡಿ ಹೂತುಹೋಗಿದ್ದ ನಾಲ್ವರ ಶವಗಳನ್ನು ಹೊರತೆಗೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button