Belagavi NewsBelgaum NewsCrimeKannada NewsKarnataka NewsNational
*ಬೆಳಗಾವಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಚವ್ಹಾಟಗಲ್ಲಿಯಲ್ಲಿ ತಡರಾತ್ರಿ ನಡೆದಿದೆ.
ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ರದಮೋನೆ (50) ಮೃತಪಟ್ಟವರು.
ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆಯಲ್ಲಿ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ಆವರಿಸಿದೆ. ಮನೆಯಲ್ಲಿದ್ದವರು ಬೆಂಕಿಯಿಂದ ಹೊರಬರಲಾಗದೆ ಸಿಲುಕಿಕೊಂಡ ಪರಿಣಾಮ ದುರಂತ ಸಂಭವಿಸಿದೆ.
ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಬೆಳಗಾವಿ ಜನರು ಬೆಚ್ಚಿಬಿದ್ದಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




