Belagavi NewsBelgaum NewsWorld

*ಓಮಾನ್ ನಲ್ಲಿ ಭೀಕರ ಅಪಘಾತ: ಬೆಳಗಾವಿಯ ಒಂದೇ ಕುಟುಂಬದ ನಾಲ್ವರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ದುಬೈನ ಓಮಾನ್ ಗೆ ಪ್ರವಾಸಕ್ಕೆಂದು ಹೋಗಿದ್ದ ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕುಟುಂಬ ಪ್ರವಾಸಕ್ಕಾಗಿ ಓಮಾನ್ ಗೆ ತೆರಳಿತ್ತು. ಈ ವೇಳೆ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಮೃತರನ್ನು ಗೋಕಾಕ್ ನ ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ್, ಆದಿಶೇಷ ಎಂದು ಗುರುತಿಸಲಾಗಿದೆ. ದುಬೈನ ಹೈಮಾ ಪ್ರದೇಶದಲ್ಲಿ ಕುಟುಂಬದವರು ತೆರಳುತ್ತಿದ್ದ ಕಾರು ಹಾಗೂ ಲಾರಿ ನಡುವೆ ಮುಖಾ ಮುಖಿ ಡಿಕ್ಕಿಯಾಗಿದ್ದು, ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ನಾಲ್ವರು ಸ್ಥಳದಲ್ಲೇ ಸಜೀವದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹಗಳನ್ನು ಭಾರತಕ್ಕೆ ತರಲು ವ್ಯವಸ್ಥೆ ಮಾಡುವಂತೆ ವಿದೇಶಾಂಗ ಸಚಿವ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

Home add -Advt

Related Articles

Back to top button