
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಶಾಲೆಗಳಿಗೆ ಈ ವರ್ಷದ ದಸರಾ ರಜೆ ನೀಡುವ ಸಂಬಂಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಸೊಮವಾರ ಹೊಸ ಆದೇಶವೊಂದನ್ನು ಹೊರಡಿಸಿದ್ದು, ಇದರನ್ವಯ ಈ ಬಾರಿ ರಾಜ್ಯಾದ್ಯಂತ ದಸರಾ ರಜೆ ಏಕರೂಪವಾಗಿರುವುದಿಲ್ಲ.
ಕೆಲವು ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನಿಗಧಿಪಡಿಸಿದ ವೇಳಾಪಟ್ಟಿಯಲ್ಲಿ ಮಾರ್ಪಾಡು ಅಗತ್ಯವಿದ್ದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು / ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಬದಲಾವಣೆಗಳನ್ನು ಮಾಡಿಕೊಳ್ಳಲು ಈಗಾಗಲೇ ಅನುಮತಿ ನೀಡಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಜೊತೆಗೆ, ಮಂಗಳೂರು ಜಿಲ್ಲೆಯಲ್ಲಿ ದಸರೆ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ದಿನಾಂಕ: 26.09,2022 ರಿಂದ 10.10.2022 ರವರೆಗೆ ದಸರೆ ರಜೆ ನೀಡುವಂತೆ ಕೋರಿಕೆ ಬಂದಿದ್ದು, ಶೈಕ್ಷಣಿಕ ಚಟುವಟಿಕೆಗಳನ್ನು ಸರಿದೂಗಿಸುವ ಹಾಗೂ ದಿನಾಂಕ: 02.10.2022ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸುವ ಷರತ್ತಿನ ಮೇರೆಗೆ ರಜೆಯನ್ನು ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲು ತಿಳಿಸಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಅಂದರೆ, ರಾಜ್ಯ ಸರಕಾರ ನಿಗದಿಪಡಿಸಿರುವ ಅವಧಿಯಲ್ಲೇ ದಸರಾ ರಜೆ ಕೊಡಬೇಕೆನ್ನುವ ಷರತ್ತು ಈ ಬಾರಿ ಇಲ್ಲ. ಸ್ಥಳೀಯ ಸನ್ನಿವೇಶ ಆಧರಿಸಿ ನಿರ್ಧರಿಸುವ ಅಧಿಕಾರ ಡಿಸಿ ಮತ್ತು ಸಿಇಒಗಳಿಗಿದೆ.
ಸಚಿವರ ಸುತ್ತೋಲೆ ಹೀಗಿದೆ:
“ಪ್ರತಿ ವರ್ಷದಂತೆ ಈ ವರ್ಷವು ರಾಜ್ಯದ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ನಿಗಧಿಪಡಿಸಿ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ. ಅದರಂತೆ ಈ ಮಾರ್ಗಸೂಚಿಯನ್ವಯ ಶಾಲಾರಂಭ, ಶಾಲಾ ಮುಕ್ತಾಯದ ದಿನ, ದಸರೆ, ಬೇಸಿಗೆ ರಜೆ ಹಾಗೂ ಕಿರು ಪರೀಕ್ಷೆ | ಪರೀಕ್ಷೆ ನಡೆಸಬೇಕಾದ ಅವಧಿ ಇತ್ಯಾದಿ ವಿವರಗಳನ್ನು ಒಳಗೊಂಡಿರುತ್ತದೆ.
https://pragati.taskdun.com/latest/a-teachers-letter-went-viral/
ಜ್ಞಾನವಾಪಿ ಮಸೀದಿ ಕೇಸ್; ಹಿಂದೂಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು
https://pragati.taskdun.com/latest/gyanavapi-casevaranasicourtjedgment/


