*ಕುಂಭಮೇಳ ದಿಂದ ವಾಪಸ್ ಆಗುವಾಗ ಅಪಘಾತ: ಬೆಳಗಾವಿಯ ಮತ್ತೆ ನಾಲ್ವರು ಸಾವು*
![](https://pragativahini.com/wp-content/uploads/2024/09/accident.jpg)
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಿಂದ ಕುಂಭಮೇಳಕ್ಕೆ ಹೊರಟಿದ್ದ ಮತ್ತೆ ನಾಲ್ವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆಸಿದೆ.
ಉತ್ತರ ಪ್ರದೇಶದ ಪ್ರಯಾಗರಾಜ್ ನ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟ ಸುದ್ದಿ ಮಾಸುವ ಮುನ್ನವೇ ಇಂದು ಬೆಳಗಿನ ಜಾವ ಮಧ್ಯಪ್ರದೇಶದ ಇಂದೋರ್ ಸಮೀಪದ ಮಾಣಪುರ ಬಳಿ ಸಂಭವಿಸಿದೆ.
ಬೆಳಗಾವಿಯ ಗಣೇಶಪುರದ ನಿವಾಸಿಗಳಾದ ಸಾಗರ ಮತ್ತು ನೀತಾ ಮೃತಪಟ್ಟಿದ್ದು, ಇನ್ನಿಬ್ಬರ ಹೆಸರು ಇನ್ನೂ ಖಚಿತ ಪಟ್ಟಿಲ್ಲ.
ಕುಂಭಮೇಳದಿಂದ ವಾಪಸ್ ಆಗುವಾಗ ಮಧ್ಯಪ್ರದೇಶದ ಇಂದೋರ್ ಬಳಿ ರಸ್ತೆ ಅಪಘಾತದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಳಗಾವಿಯ ನಾಲ್ವರು ಸೇರಿ ಹಾಗೂ ದ್ವಿಚಕ್ರ ವಾಹನದಲ್ಲಿದ್ದ ಇಂದೋರ್ ನಿವಾಸಿಗಳು ಮೃತಪಟ್ಟಿರುವ ಬಗ್ಗೆ ತಿಳಿದು ಬಂದಿದೆ.
ಬೆಳಗಾವಿಯಿಂದ ಮಹಾ ಕುಂಭಮೇಳಕ್ಕೆ ಹೋಗಿ ಬರುತ್ತಿದ್ದ 19 ಜನರ ತಂಡದಲ್ಲಿ ನಾಲ್ವರು ಮೃತಪಟ್ಟಿರುವ ಮಾಹಿತಿ ಬಂದಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಮಿಶ್ರಾ ಅವರು ಗಾಯಾಳುಗಳ ಆರೈಕೆಯಲ್ಲಿ ತೊಡಗಿದ್ದಾರೆ. ಈಗಾಗಲೇ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ ಎಂದು ಗೊತ್ತಾಗಿದೆ. 16 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ