ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಟೂರ್ ಗೆ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಹೊಸಕೋಟೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ. ಮೂವರು ವಿದ್ಯಾರ್ಥಿಗಳು ಹಾಗೂ ಮೂವರು ವಿದ್ಯಾರ್ಥಿನಿಯರು ಕಾರಿನಲ್ಲಿ ತೆರಳಿದ್ದರು. ಇವರೆಲ್ಲ ಕೋಲಾರ ಕಡೆ ಟೂರ್ ಗೆ ತೆರಳಿದ್ದರು ಎನ್ನಲಾಗಿದೆ. ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ಲಾರಿಗೆ ಡಿಕ್ಕಿಯಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಗಾರ್ಡನ್ ಸಿಟಿ ಕಾಲೇಜಿನ ಭರತ್, ವೈಷ್ಣವಿ, ವೆಂಕಟ್ ಮತ್ತು ಸಿರಿಲ್ ಮೃತರಾದವರು. ಶ್ರೀಕೃಷ್ಣ ಮತ್ತು ಅಂಕಿತಾ ರಡ್ಡಿ ಎನ್ನುವವರ ತೀವ್ರ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ