Kannada NewsKarnataka NewsLatest

ಗೋವಾ ಮತ್ತು ಕರ್ನಾಟಕ ಗಡಿಭಾಗದಲ್ಲಿ  ನಾಲ್ಕು ಹುಲಿಗಳ ಮಾರಣ ಹೋಮ

ಪ್ರಗತಿವಾಹಿನಿ ಸುದ್ದಿ, ಖಾನಾಪುರ -ಕರ್ನಾಟಕ ಹಾಗೂ ಗೋವಾ ಗಡಿಯಲ್ಲಿರುವ ಗೋವಾ ರಾಜ್ಯದ ಸತ್ತೇರಿ ಬಳಿ ಹುಲಿಗಳ ಕಳೇಬರ ಪತ್ತೆಯಾಗಿದೆ.

ವಿಷ ಹಾಕಿ ಒಂದು ಹೆಣ್ಣು, 3 ಗಂಡು ಹುಲಿಗಳ ಹತ್ಯೆಗೈದಿರುವ ಶಂಕೆಯನ್ನು ಅರಣ್ಯ ಇಲಾಖೆ ವ್ಯಕ್ತಪಡಿಸಿದೆ. ಈ ಘಟನೆಗೆ ಸಂಬಂಧ ಪಟ್ಟಂತೆ ತನಿಖೆ ಕೈಗೊಂಡಿರುವ ಗೋವಾ ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಉಭಯ ರಾಜ್ಯಗಳ‌ ಗಡಿಯಲ್ಲಿ ಘಟನೆ ನಡೆದ ಕಾರಣ ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಕರ್ನಾಟಕ ಅರಣ್ಯ ಇಲಾಖೆ , ಗೋವಾ ರಾಜ್ಯದ ಉನ್ನತ ಅಧಿಕಾರಿಗಳು, ಕರ್ನಾಟಕದ ಅರಣ್ಯ ಇಲಾಖೆ ಜೊತೆ ಸಂಪರ್ಕ ಸಾಧಿಸಿದ್ದಾರೆ. ಮೃತ ಹುಲಿಗಳ ಪೈಕಿ ಎರಡು ಮರಿಗಳು ಸೇರಿವೆ. ಹುಲಿಗಳ ಹತ್ಯೆ ಪ್ರಕರಣವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.

 

Home add -Advt

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button