
ಪ್ರಗತಿವಾಹಿನಿ ಸುದ್ದಿ: ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತೆಲಂಗಾಣದ ಮಂಚಿಯಾಲ ಜಿಲ್ಲೆಯ ಜನ್ನಾರಂ ಮಂಡಲದ ರೊಟಿಗೂಡ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಸಮನ್ವಿತಾ (10) ಎಂದು ಗುರುತಿಸಲಾಗಿದೆ. ನಾಲ್ಕನೇ ತರಗತಿ ಓದುತ್ತಿದ್ದ ಬಾಲಕಿ ಎಂದಿನಂತೆ ಬೆಳಗ್ಗೆ ಶಾಲೆಗೆ ಹೋಗಲು ತಯಾರಾಗುತ್ತಿದ್ದ ವೇಳೆ ಏಕಾಏಕಿ ಕುಸಿದುಬಿದ್ದಿದ್ದಾಳೆ. ತಕ್ಷಣ ಆಕೆಯ ತಂದೆ ನಾಗರಾಜು ಅವರು ಮಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ.
ಕಳೆದ ಎರಡು ವಾರಗಳ ಹಿಂದಷ್ಟೇ ಇದೇ ಜಿಲ್ಲೆಯ ಚೆನ್ನೂರು ಪಟ್ಟಣದ ಪದ್ಮನಗರ್ ಕಾಲೋನಿಯಲ್ಲಿ 12 ವರ್ಷದ ಕಸ್ತೂರಿ ನಿವೃತಿ ಎಂಬ ಬಾಲಕಿ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಇದೀಗ ಇಂತಹ ಘಟನೆಗಳು ಒಂದಾದಮೇಲೊಂದರಂತೆ ನಡೆಯುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ