Latest

ಮೂಳೆ ಮುರಿತ: ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಭಾನುವಾರ ಸಂಜೆ ಕುಸಿದು ಬಿದ್ದಿದ್ದರಿಂದ ಮೂಳೆ ಮುರಿದ ಹಿನ್ನೆಲೆಯಲ್ಲಿ ಸಾಲುಮರದ ತಿಮ್ಮಕ್ಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಸಂಜೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸೋಮವಾರ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಉಳಿದಂತೆ ಆರೋಗ್ಯದಲ್ಲಿ ಸಮಸ್ಯೆ ಇಲ್ಲ ಎಂದು ಅವರ ದತ್ತು ಪುತ್ರ ಉಮೇಶ ತಿಳಿಸಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button