Kannada NewsKarnataka NewsLatest

ವಂಚನೆ ಪ್ರಕರಣ; ಹಾಲಶ್ರೀ ಜಾಮೀನು ನಿರಾಕರಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹಿರೇಹಡಗಲಿಯ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ನ್ಯಾಯಾಂಗ ಬಂಧನದಲ್ಲಿರುವ ಹಾಲಶ್ರೀ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶ ಟಿ. ಗೋವಿಂದಯ್ಯ ಅವರು ವಿಚಾರಣೆ ಕೈಗೆತ್ತಿಕೊಂಡು ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ. ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಅಕ್ಟೋಬರ್‌ 11 ರಂದು ಮುಕ್ತಾಯಗೊಳಿಸಿ, ತೀರ್ಪು ಕಾಯ್ದಿರಿಸಿತ್ತು.

Home add -Advt

ಉದ್ಯಮಿಯೊಬ್ಬರಿಗೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಹಾಲಶ್ರೀ ಅವರ ಮೇಲೂ ಕೇಸು ದಾಖಲಾಗಿತ್ತು.

Related Articles

Back to top button