Politics

*ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿ.ಕೆ. ಸುರೇಶ್ ಕಮಿಷನರ್ ಗೆ ದೂರು*

ಪ್ರಗತಿವಾಹಿನಿ ಸುದ್ದಿ: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಡಿ.ಕೆ. ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಭಾನುವಾರ ಪತ್ರ ಬರೆದಿದ್ದಾರೆ.

ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ದೂರು ಪತ್ರದಲ್ಲಿ ಸುರೇಶ್ ಅವರು ಮನವಿ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button