Belagavi NewsBelgaum NewsKannada NewsKarnataka News

*ಮತ್ತಷ್ಟು ಹೆಚ್ಚಲಿದೆ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್ *

ಪ್ರಗತಿವಾಹಿನಿ ಸುದ್ದಿ: ಈಗಾಗಲೆ ರಾಜ್ಯದಲ್ಲಿ ಎಲ್ಲಡೆ ಮಳೆ ಅಬ್ಬರ ಜೋರಾಗಿದ್ದು, ಇಂದಿನಿಂದ ಮುಂದಿನ ಎರಡು ದಿನ ಮಳೆ ಅಬ್ಬರ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಲಾಗಿದೆ.

Home add -Advt

ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜೊತೆಗೆ ಮಂಡ್ಯ ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

Related Articles

Back to top button