ಪ್ರಗತಿವಾಹಿನಿ ಸುದ್ದಿ, ಕಾರವಾರ -: ರಾಜ್ಯದ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ೨೦೧೯-೨೦ನೇ ಅವಧಿಯ ಶೈಕ್ಷಣಿಕ ವರ್ಷದ ಅಂತಿಮ ಪರೀಕ್ಷೆಗಳು ಪ್ರಾರಂಭವಾಗಲಿವೆ.
ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಮಾರ್ಚ್ ೪ ರಿಂದ ೨೩ ರವರೆಗೆ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಾರ್ಚ್ ೨೭ ರಿಂದ ಏಪ್ರಿಲ್ ೯ರವರೆಗೆ ಪರೀಕ್ಷೆಗಳು ನಡೆಯಲವೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ತೆರಳಲು ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ