Latest

*ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಕ್ಷಣಗಣನೆ; ಅಗತ್ಯವಿರುವ ದಾಖಲೆಗಳೇನು? ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಕ್ಷಣ ಗಣನೆ ಆರಂಭವಾಗಿದೆ.

ನಾಳೆ ಜೂನ್ 11ರಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಮುನ್ನ ಮೆಜೆಸ್ಟಿಕ್ ನಿಂದ ವಿಧಾನಸೌಧದವರೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸಿ ಮಹಿಳೆಯರಿಗೆ ಖುದ್ದು 0 ದರದ ಪಿಂಕ್ ಟಿಕೆಟ್ ನೀಡಲಿದ್ದಾರೆ. 10-15 ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್ ಕೂಡ ವಿತರಿಸಲಿದ್ದಾರೆ. ಬಳಿಕ ವಿಧಾನಸೌಧದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಈ ಮೂಲಕ ನಾಳೆ ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಎಲ್ಲಿಬೇಕಾದರೂ ಪ್ರಯಾಣಿಸಬಹುದು. ಆದರೆ ಉಚಿತ ಪ್ರಯಾಣಕ್ಕೆ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಅಗತ್ಯ. ಸೇವಾಸಿಂದು ಆಪ್ ಮೂಲಕ ಮೂರು ತಿಂಗಳ ಒಳಗಾಗಿ ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯಬೇಕು. ಅಲ್ಲಿಯವರೆ ಮಹಿಳೆಯರು ಈ ಕೆಳಗಿನ ಯಾವುದಾದರೂ ದಾಖಲೆಗಳನ್ನು ತೋರಿಸಿ ಉಚಿತ ಪ್ರಯಾಣ ಮಾಡಬಹುದು.

ಆಧಾರ್ ಕಾರ್ಡ್
ವೋಟರ್ ಐಡಿ
ಡ್ರೈವಿಂಗ್ ಲೈಸೆನ್ಸ್
ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ನೀಡುವ ವಾಸಸ್ಥಳದ ಗುರುತಿನ ಚೀಟಿ – ಇವುಗಳಲ್ಲಿ ಯಾವುದಾದರೂ ಒಂದು ದಾಖಲೆ ತೋರಿಸಿ ಉಚಿತವಾಗಿ ಸರ್ಕಾರಿ ಬಸ್ ನಲ್ಲಿ ಕರ್ನಾಟಕ ಮಹಿಳೆಯರು ಪ್ರಯಾಣಿಸಬಹುದು.

Home add -Advt

ಇನ್ನು ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರು ಹತ್ತಿರದ ಬೆಂಗಳೂರು ಒನ್, ಸೈಬರ್ ಸೆಂಟರ್ ಗೆ ಭೇಟಿ ನೀಡಿ. ಸೇವಾಸಿಂಧು ಪೋರ್ಟಲ್ ಮೂಲಕ ಹೆಸರು ನೊಂದಾಯಿಸಿಕೊಂಡು ಅಗತ್ಯ ದಾಖಲೆ ಒದಗಿಸಿದರೆ ಸ್ಮಾರ್ಟ್ ಕಾರ್ಡ್ ಮಾಡಿಕೊಡಲಾಗುತ್ತದೆ.

https://pragati.taskdun.com/odisha-train-accidentchikkamagaloremanheart-attackdeath/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button