Latest

*ಶಕ್ತಿ ಯೋಜನೆ ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಉಡುಪಿ: ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆ ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಅವರು ಇಂದು ಉಡುಪಿಯು ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 20,000 ಕ್ಕೂ ಅಧಿಕ ಸರ್ಕಾರಿ ಬಸ್ಗಳಿದ್ದು ಅವುಗಳಲ್ಲಿ 18,609 ಬಸ್ಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ದೊರೆಯಲಿದ್ದು, ರಾಜ್ಯದ ಒಟ್ಟು ಸರ್ಕಾರಿ ಬಸ್‌ಗಳಲ್ಲಿನ ಶೇ.95 ಬಸ್ಗಳಲ್ಲಿ ಪ್ರತಿದಿನ 41.8 ಲಕ್ಷ ಮಹಿಳೆಯರು ತಮ್ಮ ಪ್ರತಿದಿನದ ದೈನಂದಿನ ದುಡಿಮೆ ಮತ್ತಿತರ ಕಾರ್ಯಗಳಿಗೆ ಬಸ್‌ಗಳಲ್ಲಿ ಸಂಚರಿಸಲಿದ್ದು, ಈ ಉಚಿತ ಪ್ರಯಾಣವು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಜೀವನಕ್ಕೆ ನೆರವಾಗಲಿದೆ. ಈ ಯೋಜನೆಯಿಂದ ಸರ್ಕಾರಕ್ಕೆ ವಾರ್ಷಿಕ 4051 ಕೋಟಿರೂ ವೆಚ್ಚವಾಗಲಿದ್ದು, ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಈಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.

ರಾಜ್ಯ ಸರ್ಕಾರವು ಚುನಾವಣಾ ಅವಧಿಯಲ್ಲಿ ನೀಡಿದ ಉಳಿದ 4 ಗ್ಯಾರಂಟಿಗಳನ್ನು ಹಂತಹಂತವಾಗಿ ಈಡೇರಿಸಲಾಗುವುದು ಎಂದ ಸಚಿವರು , ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ ಆಗಸ್ಟ್ 15 ರಂದು ಚಾಲನೆ ನೀಡಲಾಗುವುದು. ರಾಜ್ಯದ ಬಿಪಿಎಲ್ ಮತ್ತು ಎಪಿಎಲ್ ಎಲ್ಲಾ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದಾಗಿದ್ದು, ಈ ಕುರಿತ ಅರ್ಜಿನಮೂನೆಯನ್ನು ಇನ್ನು 2 ದಿನಗಳಲ್ಲಿ ಬಿಡುಗಡೆಮಾಡಲಾಗುವುದು. ಆನ್‌ಲೈನ್ ಮೂಲಕ ಅಥವಾ ಸಿಡಿಪಿಓಗಳ ಮೂಲಕ , ಅಂಗನವಾಡಿ ಶಿಕ್ಷಕರ ಮೂಲಕ ಹಾಗೂ ಗ್ರಾಮ್ ಒನ್ ಮೂಲಕ ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

Home add -Advt

ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿ, ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿ ಮತ್ತು ಇತರೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಮತ್ತು ಎಲ್ಲಾ ಪಕ್ಷಗಳ ಸಹಕಾರದಿಂದ, ಬಸವಣ್ಣ ಅವರ ಕಾಯಕವೇ ಕೈಲಾಸ ಹಾಗೂ ದಯಯೇ ಧರ್ಮದ ಮೂಲ ಸಂದೇಶದಂತೆ ತಾನು ಕಾರ್ಯನಿರ್ವಹಿಸಲಿದ್ದೇನೆ. ಜಿಲ್ಲಾಡಳಿತವು ಜಿಲ್ಲೆಯ ಜನರ ಸಮಸ್ಯೆಗಳಿಗೆ 24ಗಂಟೆಗಳ ಕಾಲ ಸದಾ ಸ್ಪಂದಿಸುವಂತೆ ಮತ್ತು ಎಲ್ಲಾ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಹಾಗೂ ಜಿಲ್ಲೆಯ ಪ್ರಗತಿಗೆ ಎಲ್ಲಾ ರೀತಿಯ ಸಂಪೂರ್ಣ ಸಹಕಾರ ನೀಡುವುದಾಗಿ ಸಚಿವರು ತಿಳಿಸಿದರು.
ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಮ್ಹಾಕೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್ , ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ, ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರನ್ನು ಸನ್ಮಾನಿಸಲಾಯಿತು.

Related Articles

Back to top button