ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕೆ.ಎಲ್.ಇ. ಡಾ. ಪ್ರಭಾಕರ ಕೋರೆ ಉಚಿತ ಆಸ್ಪತ್ರೆ ಮತ್ತು ಶ್ರೀ ಸಾಯಿ ಯುತ್ ಅಸೋಸಿಯೇಷನ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಬೆಳಗಾವಿಯ ರುಕ್ಮೀಣ ನಗರದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಬೆಳಗಾವಿ ಉತ್ತರ ಶಾಸಕರಾದ ಅನಿಲ ಬೆನಕೆ ಉದ್ಘಾಟಿಸಿ, ಬಡತನದಲ್ಲಿರುವ ಜನರಿಗೆ ಉಚಿತ ತಪಾಸಣೆ, ಔಷದೋಪಚಾರ ಮತ್ತು ಶಸ್ತ್ರ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಆಗಮಿಸಿದ ಡಾ. ಆರ್.ಎಸ್. ಮುದೋಳ್ (ವೈದ್ಯಕೀಯ ಅಧೀಕ್ಷಕರು ಪ್ರಭಾಕರ ಕೋರೆ ಉಚಿತ ಆಸ್ಪತ್ರೆ ಬೆಳಗಾವಿ) ಮಾತನಾಡಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಕಲ್ಪಿಸಿದಂತಹ ಉಚಿತ ಆರೋಗ್ಯ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಯೋಜನೆಗಳನ್ನು ಕೆ.ಎಲ್.ಇ ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗೆ ನೀಡಲಾಗುತ್ತದೆ ಎಂದರು.
ಶಿಬಿರದಲ್ಲಿ ಸುಮಾರು 800 ರೋಗಿಗಳಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಲಾಯಿತು ಹಾಗೂ ನೂರಕ್ಕೂ ಹೆಚ್ಚು ರೋಗಿಗಳನ್ನು ಕೆ.ಎಲ್.ಇ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದುಕೊಂಡು ಹೋದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ