Belagavi NewsBelgaum NewsKannada NewsKarnataka News

*ಸವದತ್ತಿಯಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಕೆಎಲ್ ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದ್ರೋಗ ವಿಭಾಗವು ಸವದತ್ತಿಯ ಕೆಎಲ್ಇ ಸಂಸ್ಥೆಯ ಎಸ್ ವಿ ಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯ ಹಾಗೂ ರೋಟರಿ ಕ್ಲಬ್ ಆಫ್ ಬೆಳಗಾವಿ(ದಕ್ಷಿಣ) ಇವುಗಳ ಸಂಯುಕ್ತಾಶ್ರದಲ್ಲಿ ಸವದತ್ತಿಯಲ್ಲಿ ಜುಲೈ 6  ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ರವರೆಗೆ ಉಚಿತ ಹೃದಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.

ಎದೆ ನೋವು, ಉಸಿರಾಟದ ತೊಂದರೆ, ಆಯಾಸ, ಕುತ್ತಿಗೆ, ದವಡೆ, ಗಂಟಲು, ಹೊಟ್ಟೆಯ  ಮೇಲ್ಭಾಗ ಅಥವಾ ಬೆನ್ನಿನಲ್ಲಿ ನೋವು,ಎದೆಯುರಿ, ಲಘು ತಲೆತಿರುಗುವಿಕೆ ಅಥವಾ ಹಠಾತ್ ತಲೆತಿರುಗುವಿಕೆ, ಅನಿಯಮಿತ ಹೃದಯ ಬಡಿತ,  ಕಾಲುಗಳಲ್ಲಿ ಊತ,  ಆತಂಕ ಸೇರಿದಂತೆ ಹೃದಯ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಶಿಬಿರಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ. 

ಮುಖ್ಯವಾಗಿ ಹೃದಯ ಸಮಸ್ಯೆಗಳಿಂದ ಬಳಲುತ್ತಿರುವ ಮಕ್ಕಳನ್ನು ಶಿಬಿರದಲ್ಲಿ ವೈದ್ಯರು ಸಮಗ್ರವಾಗಿ ತಪಾಸಿಸಿ ಸಲಹೆ ಸೂಚನೆ ನೀಡಲಿದ್ದಾರೆ. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಸಂಪರ್ಕಿಸಿ; 9986992467/ 9844366188/ 9535474870

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button