Latest

ದೃಷ್ಟಿದೋಷವುಳ್ಳ ಶಾಲಾ ಮಕ್ಕಳಿಗೆ ಉಚಿತ ಕನ್ನಡಕ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ನೇತೃತ್ವದಲ್ಲಿ ಜ.20ರ ನಂತರ ಉಚಿತ ನೇತ್ರ ತಪಾಸಣೆ ಮತ್ತು ಕನ್ನಡ ವಿತರಣೆ ನಡೆಯಲಿದೆ.

ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿದೋಷ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಈ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ವಿದ್ಯಾಗಮ ತರಗತಿಗಳಿಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.

6-10ನೇ ತರಗತಿ ಮಕ್ಕಳು ವಯೋಸಹಜ ಬೆಳವಣಿಗೆ ಹೊಂದಿರುವುದರಿಂದ ಈ ಮಕ್ಕಳಿಗೆ ಕಣ್ಣಿನ ತಪಾಸಣೆ ಕಡ್ಡಾಯಗೊಳಿಸಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button