
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆಟೋ ಹಾಗೂ ಕ್ಯಾಬ್ ಚಾಲಕರಿಗೆ ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಆರೊಗ್ಯ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಹೇಳಿದರು.
ಶಾಸಕ ಮಂಜುನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು,ರಾಜ್ಯ ಸರ್ಕಾರವು 2011-12 ನೇ ಸಾಲಿನಿಂದ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆ ಎನ್ನುವ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸುತಿದ್ದು 2016-17 ನೇ ಸಾಲಿನಲ್ಲಿ ಚಾಲಕರೊಂದಿಗೆ ನಿರ್ವಾಹಕರು ಹಾಗು ಕ್ಲೀನರ್ಸ್‍ಗಳಿಗೂ ಸಹ ಅಪಘಾತ ವಿಮಾ ಸೌಲಭ್ಯವನ್ನು ವಿಸ್ತರಿಸಲು ಪರಿಷ್ಕೃತ ಕರ್ನಾಟಕ ರಾಜ್ಯ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತರಲಾಗಿರುತ್ತದೆ. ಈ ಯೋಜನೆಯಲ್ಲಿ ಅಪಘಾತದಿಂದ ಮರಣಹೊಂದಿದ ಪ್ರಕರಣಗಳಲ್ಲಿ ನಾಮನಿರ್ದೇಶಿತರಿಗೆ ರೂ. 5 ಲಕ್ಷ ಪರಿಹಾರ, ಸಂಪೂರ್ಣ ಶಾಶ್ವತ ದುರ್ಬಲತೆ ಪ್ರಕರಣಗಳಲ್ಲಿ ಫಲಾನುಭವಿಗಳಿಗೆ 5 ಲಕ್ಷ ರೂ. ವರೆಗೆ ಪರಿಹಾರ ಮತ್ತು ಒಳರೋಗಿಯಾಗಿ ಚಿಕಿತ್ಸೆ ಪಡೆದ್ದಲ್ಲಿ 1 ಲಕ್ಷ ರೂ. ವರೆಗೆ ಚಿಕಿತ್ಸಾ ವೆಚ್ಚದ ಮರುಪಾವತಿ ನೀಡಲಾಗುತ್ತದೆ ಎಂದರು.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆಟೋಚಾಲಕ ಹಾಗೂ ಕ್ಯಾಬ್ ಚಾಲಕ ಒಳಗೊಂಡಂತೆ ಆರ್ಥಿಕವಾಗಿ ಹಿಂದುಳಿದ ವರ್ಗದ ಅರ್ಹ ಕುಟುಂಬಗಳಿಗೆ ವಸತಿ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಕೋವಿಡ್-19ರ ಒಂದನೇ ಅಲೆಯ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರದಿಂದ ಜೀವನೋಪಾಯಕ್ಕೆ ಒಮ್ಮೆ ಪರಿಹಾರ ಧನವನ್ನಾಗಿ 2020-21 ನೇ ಸಾಲಿನಲ್ಲಿ ರೂ. 5000 ಮತ್ತು ಎರಡನೇ ಅಲೆ ಹಿನ್ನೆಲೆಯಲ್ಲಿ 3000 ರೂ. ಮಂಜೂರು ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದರು.
ವಂದೇ ಭಾರತ್, ಶತಾಬ್ದಿ ಸೂಪರ್‌ಫಾಸ್ಟ್ ರೈಲುಗಳು ವೇಳಾಪಟ್ಟಿ ಬದಲಾವಣೆಗೆ ಪರಿಶೀಲಿಸಿ ಕ್ರಮ
https://pragati.taskdun.com/vande-bharat-shatabdi-superfast-trains-check-for-schedule-change/
*ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಪ್ರಧಾನಿ ಮೋದಿಯಿಂದ ಉದ್ಘಾಟನೆ*
https://pragati.taskdun.com/hubli-dharwadyuvajanotsavapm-narendra-modicm-basavaraj-bommai/
ಸರಕಾರ ನಾಳೆ ಆಟ ಆಡಿದರೆ ನನ್ನ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ -ಯತ್ನಾಳ
https://pragati.taskdun.com/if-the-government-plays-games-tomorrow-i-will-announce-my-next-political-decision-yatna/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ