
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ. ಸಾಧ್ಯವಾದಷ್ಟು ಮನೆಯಲ್ಲಿಯೇ ಇರಿ. ಅಗತ್ಯವಿದ್ದರೆ ಮಾತ್ರ ಹೊರಗೆ ಬನ್ನಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಇಂದಿನಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಎಲ್ಲರೂ ಲಸಿಕೆ ಪಡೆದುಕೊಳ್ಳಿ, ಸುರಕ್ಷಿತವಾಗಿರಿ. ಜೊತೆಯಾಗಿ ನಾವು ಕೊರೋನಾ ಹಿಮ್ಮೆಟ್ಟಿಸೋಣ ಎಂದು ಕರೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಇಂದಿನಿಂದ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಐತಿಹಾಸಿಕ ನಿರ್ಣಯ ಕೈಗೊಂಡಿದೆ. ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ವದಂತಿಗಳನ್ನು ನಂಬಬೇಡಿ, ಎಲ್ಲರೂ ಲಸಿಕೆ ಪಡೆಯಬೇಕು ಮನವಿ ಮಾಡಿದ್ದಾರೆ.
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವದ್ದಾಗಿದೆ; ಮನೆಯಲ್ಲೇ ಯೋಗಮಾಡಿ ದಿನ ಆಚರಿಸಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ