Kannada NewsKarnataka News

ಪರೀಕ್ಷೆಗೆ ತೆರಳಲು ಉಚಿತ ವಾಹನ ವ್ಯವಸ್ಥೆ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ನಾಳೆಯಿಂದ ನಡೆಯಲಿರುವ ಎಸ್.ಎಸ್.ಎಲ್.ಸಿ  ಪರಿಕ್ಷೆಯ ಸಲುವಾಗಿ ಉತ್ತರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ತಮ್ಮ ತಮ್ಮ ಪರಿಕ್ಷಾ ಕೇಂದ್ರಗಳಿಗೆ ಹೋಗಲು ವಾಹನಗಳ ಅವಶ್ಯಕತೆಯಿರುವ ಬಡ ವಿದ್ಯಾರ್ಥಿಗಳಿಗೆ ಉಚಿತ ವಾಹನಗಳ ವ್ಯವಸ್ಥೆ ಮಾಡಿದ್ದಾರೆ.

  ಬಡ ವರ್ಗದ ವಿದ್ಯಾರ್ಥಿಗಳು ಹಾಗೂ ಪಾಲಕರು ಇವುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ದೇಶ, ರಾಜ್ಯ ಹಾಗೂ ನಗರದಲ್ಲಿ ಕೋವಿಡ್ ೧೯  ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಪರಿಕ್ಷೆಯನ್ನು ಮುಂದೂಡಲಾಗಿತ್ತು. ಆದ್ದರಿಂದ ನಾಳೆ ನಡೆಯುತ್ತಿರುವ ಎಸ್.ಎಸ್.ಎಲ್.ಸಿ ಪರಿಕ್ಷೆಗಳನ್ನು ಧೈರ್ಯದಿಂದ ಬರೆಯಬೇಕು ಹಾಗೂ ಎಲ್ಲ ಪಾಲಕರು ತಮ್ಮ ತಮ್ಮ ಮಕ್ಕಳ ಪರೀಕ್ಷೆಯ ಬಗ್ಗೆ ಕಾಳಜಿ ವಹಿಸಬೇಕೆಂದು ಬೆನಕೆ ಹೇಳಿದರು.

 ಬಡ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹೋಗಲು ಅನಾನುಕೂಲತೆಗಳಿದ್ದರೆ ಅಂತಹ ಪಾಲಕ ಹಾಗೂ ವಿದ್ಯಾರ್ಥಿಗಳಿಗೆ ನಗರದಲ್ಲಿ ಉಚಿತ ವಾಹನ ವ್ಯವಸ್ಥೆಯನ್ನು ಮಾಡಲಾಗಿದ್ದು ಸದುಪಯೋಗ ಮಾಡಿಕೊಳ್ಳಬೇಕೆಂದರು.

ಬೆಳಗಾವಿ ಉತ್ತರ ಮತಕ್ಷೇತ್ರದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿ ವಿದ್ಯಾರ್ಥಿಗಳು ಮಾಸ್ಕ್ ಹಾಕಿಕೊಳ್ಳಬೆಕು ಮತ್ತು ಸ್ಯಾನಿಟೈಜರ್ ಹಾಗೂ ಪ್ರತಿ ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಿ ಪರೀಕ್ಷಾ ಕೊಠಡಿಗೆ ಹೋಗುವ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ತಿಳಿಸಿದರಲ್ಲದೆ ಅಂತಹ ಸಂದರ್ಭದಲ್ಲಿ ಯಾವುದಾದರೂ ವಿದ್ಯಾರ್ಥಿಗಳಿಗೆ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಸುವ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಬಿ.ಜೆ.ಪಿ ಕಾರ್ಯಕರ್ತರು, ರಿಕ್ಷಾ ಚಾಲಕರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button