Latest

ಡಬಲ್ ಮರ್ಡರ್ ಕೇಸ್; 6 ಆರೋಪಿಗಳ ಬಂಧನ

ಪ್ರಗತಿವಾಹಿನಿ ಸುದ್ದಿ; ಹಾಸನ: ಹಾಸನದಲ್ಲಿ ನಡೆದಿದ್ದ ವೃದ್ಧ ದಂಪತಿಗಳಿಬ್ಬರ ಕೊಲೆ ಪ್ರಕರಣರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚನ್ನರಾಯಪಟ್ಟಣ ಪೊಲೀಸರು 6 ಜನ ಆರೋಪಿಗಳನ್ನು ಬಂಧಿಸಿದ್ದು, ಮಂಜಶೆಟ್ಟಿ(23), ಪ್ರಸಾದ್(25), ನಂದನ್ ಕುಮಾರ್(33), ಯೋಗಾನಂದ(29), ಭರತ್(24), ಮಧು(25) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ ಸುಮಾರು 15 ಲಕ್ಷ ಮೌಲ್ಯದ 316 ಗ್ರಾಂ ಚಿನ್ನ, ಎರಡು ಕೆಜಿ 250 ಗ್ರಾಂ ಬೆಳ್ಳಿ, ಸುಮಾರು 25 ಸಾವಿರ ನಗದು, ಮೂರು ಮೊಬೈಲ್ ಫೋನ್, ಒಂದು ಕಾರು, ಮೂರು ಬೈಕ್ ವಶ ಪಡಿಸಿಕೊಳ್ಳಲಾಗಿದೆ.

ಆಗಸ್ಟ್ 29 ರಂದು ಚನ್ನರಾಯಪಟ್ಟಣ ತಾಲೂಕಿನ, ಆಲಗೊಂಡನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಮುರಳೀಧರ್ ಮತ್ತು ಉಮಾದೇವಿ ದಂಪತಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಈ ಹಿಂದೆ ಇಬ್ಬರನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಇಬ್ಬರು ನೀಡಿದ ಮಾಹಿತಿ ಆಧರಿಸಿ ಇದೀಗ 6 ಜನ ಆರೋಪಿಗಳನ್ನು ಬಂಧಿಸಲಾಗಿದೆ.

Home add -Advt

Related Articles

Back to top button