Kannada NewsKarnataka NewsLatest

*ಇನ್ಮುಂದೆ 108 ಸೇವೆ ಸರ್ಕಾರದಿಂದಲೇ ನಿರ್ವಹಣೆ*

ಪ್ರಗತಿವಾಹಿನಿ ಸುದ್ದಿ: ಇನ್ನು ಮುಂದೆ 108 ಆರೋಗ್ಯ ಕವಚ ಸೇವೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ವಹಿಸಲಿದೆ.

ರಾಜ್ಯದಲ್ಲಿ 108 ಅಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ ಈ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ರಾಜ್ಯ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತೆಕ್ಕೆಗೆ ನೀಡಿದೆ.

ಅಂಬುಲೆನ್ಸ್‌ ಸೇವೆಯನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ ಇದನ್ನು ನಿಯಂತ್ರಿಸುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಇಲಾಖೆಯ ಅಧೀನಕ್ಕೆ ಒಳಪಡಿಸುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ. ಈ ಕ್ರಮದಿಂದ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆ ಆಗುವ ವಿಶ್ವಾಸವಿದೆ. ರಾಜ್ಯದಲ್ಲಿ 108 ಅಂಬುಲೆನ್ಸ್ ಅನ್ನು ಆರೋಗ್ಯ ಇಲಾಖೆಯೇ ನಿರ್ವಹಣೆ ಮಾಡುವುದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ರೂ. ಉಳಿತಾಯವಾಗಲಿದೆ ಎಂದು ಗುಂಡೂರಾವ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button