Kannada NewsKarnataka NewsNationalPolitics
*KSDL ಉತ್ಪನ್ನಗಳಿಗೆ ಫುಲ್ ಡಿಮ್ಯಾಂಡ್: ಎಂ ಬಿ ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ ಹೊಸ ಬ್ರಾಂಡ್ ಅಂಬಾಸಿಡರ್ ಆಗಿ ಮಿಲ್ಕ್ ಬ್ಯೂಟಿ ತಮನ್ನಾ ಭಾಟಿಯಾ ಅವರನ್ನು ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಅವರ ನೇಮಕ ಆಗಿತ್ತಿದಂತೆ ಗುಡ್ ನ್ಯೂಸ್ ಹೊರ ಬಿದ್ದಿದೆ.
ಹೊಸ ಬ್ರಾಂಡ್ ಅಂಬಾಸಿಡರ್ ಅಧಿಕೃತವಾಗಿ ಪ್ರಚಾರ ಆರಂಭಿಸುವುದಕ್ಕೂ ಮೊದಲೇ, ಈ ಸುದ್ದಿಯೊಂದೇ ನಮ್ಮ ಉತ್ಪನ್ನಗಳಿಗೆ ಉತ್ತಮ ಪ್ರತಿಕ್ರಿಯೆ ತಂದುಕೊಟ್ಟಿದೆ. ಇದು ನಮ್ಮ ವಾಣಿಜ್ಯ ಕಾರ್ಯತಂತ್ರದ ಯಶಸ್ಸನ್ನು ತೋರಿಸುತ್ತದೆ ಎಂದು ಸಚಿವ ಎಂ ಬಿ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.
ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ KSDL ಉತ್ಪನ್ನಗಳಿಗೆ ಈಗಾಗಲೇ ದೇಶಾದ್ಯಂತ ದೊಡ್ಡ ಬೇಡಿಕೆಯಿದ್ದು, ಈ ಬೆಳವಣಿಗೆಯಿಂದ ಭವಿಷ್ಯದಲ್ಲಿ ಮತ್ತಷ್ಟು ಉತ್ತಮ ವ್ಯಾಪಾರವನ್ನು ನಿರೀಕ್ಷಿಸಬಹುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.




