Belagavi NewsBelgaum NewsKannada NewsKarnataka NewsSports

*ಬೆಳಗಾವಿ ಕ್ರಿಕೆಟ್ ಸ್ಟೇಡಿಯಂ ಇನ್ನಷ್ಟು ಅಭಿವೃದ್ಧಿ: ವೆಂಕಟೇಶ್ ಪ್ರಸಾದ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿರುವ ವೆಂಕಟೇಶ್ ಪ್ರಸಾದ್ ಅವರು ಬೆಳಗಾವಿಗೆ ಭೇಟಿ ನೀಡಿ ಸಿಎಂ, ಡಿಸಿಎಂ ಜೊತೆ ಚರ್ಚೆ ನಡೆಸಿದರು. ಬಳಿಕ ಬೆಳಗಾವಿಯಲ್ಲಿ ಇರುವ ಕ್ರಿಕೆಟ್ ಸ್ಟೇಡಿಯಂಗೆ ಭೇಟಿ ನೀಡಿದರು. ಸ್ಟೇಡಿಯಂನಲ್ಲಿ ಮೂರ್ನಾಲ್ಕು ವರ್ಷದಿಂದ ಪಂದ್ಯ ನಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು‌.

ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತಮಾಡಿದ ಅವರು,  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶೀಘ್ರದಲ್ಲೇ ರಾಷ್ಟ್ರೀಯ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳು ಅರಂಭವಾಗಲಿವೆ.‌

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೂ ಆರ್ ಸಿಪಿ ಫೈನಲ್ ನಲ್ಲಿ ಗೆಲುವು ದಾಖಲಿಸಿದ ಬಳಿಕ ನಡೆದ ಕಾಲ್ತುಳಿತವಾಗಿತ್ತು. ಇದರಿಂದ ಅಂತಾರಾಷ್ಟ್ರೀಯ ಮಹಿಳಾ ವಿಶ್ವಕಪ್ ಸೇರಿದಂತೆ ಅನೇಕ ಅಂತಾರಾಷ್ಟ್ರೀಯ ಪಂದ್ಯಾವಳಿಗಳು ರದ್ದಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣವನ್ನು ಐಕಾನ್ ಗ್ರೌಂಡ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ಸಿಎಂ, ಡಿಸಿಎಂ ಅವರೊಂದಿಗೆ ಚರ್ಚೆ ನಡೆಸಿದ್ದೇವೆ. ಈಗಾಗಲೇ ಭಾರತೀಯ ‌ಕ್ರಿಕೆಟ್ ಮಂಡಳಿ ಇಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸಲು ವಿವರಣೆ ಕೇಳಿದ್ದಾರೆ ಎಂದರು‌.

Home add -Advt

ಬೆಳಗಾವಿಯಲ್ಲಿ ಇರುವ ಸ್ಟೇಡಿಯಂ ಅಭಿವೃದ್ಧಿ ಮಾಡಿ, ಹೆಚ್ಚು ಹೆಚ್ಚು ಪಂದ್ಯಗಳು ನಡೆಯುವಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು‌.

Related Articles

Back to top button