
ಪ್ರಗತಿವಾಹಿನಿ ಸುದ್ದಿ: ಆಂಧ್ರಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ಮುರಸು ಚಂಡಮಾರುತದ ಪ್ರಭಾವ ತೀವ್ರಗೊಂಡಿದ್ದು, ಭಾರೀ ಮಳೆ ಹಾಗೂ ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಆಂಧ್ರಪ್ರದೇಶದಲ್ಲಿ ಚಂಡಮಾರುತಕ್ಕೆ ಸಂಬಂಧಿಸಿದ ಘಟನೆಗಳಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಂಡಮಾರುತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎರಡೂ ರಾಜ್ಯಗಳ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಪಾಯದ ಮುನ್ಸೂಚನೆ ಇರುವ ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವೂ ಭರದಿಂದ ಸಾಗಿದೆ.
ಆಂಧ್ರಪ್ರದೇಶದಲ್ಲಿ ಈವರೆಗೆ 12,230 ಜನರನ್ನು ಸ್ಥಳಾಂತರಿಸಿ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ. ಜನರ ಸುರಕ್ಷತೆಗೆ ಆದ್ಯತೆ ನೀಡಿರುವ ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ.
ಭಾರೀ ಮಳೆ ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ. ಚಂಡಮಾರುತದ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯಕ್ಕೆ ಅನುಗುಣವಾಗಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.




