Kannada NewsKarnataka NewsLatest

*ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಕೊರತೆಯಿಂದ ಕಂಗಾಲಾಗಿದ್ದ ರೈತರಿಗೆ ಕೊಂಚ ನಿಟ್ಟುಸಿರು ಬಿಡುವ ಸುದ್ದಿ. ರಾಜ್ಯಾದ್ಯಂತ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗುಡುಗು, ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ದಾವಣಗೆರೆ ಹಾಗೂ ಬೆಳಗಾವಿ, ಬೀದರ್, ಬಳ್ಳಾರಿ, ರಾಯಚೂರು, ಯಾದಗಿರಿ, ಧಾರವಾಡ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ರಾಜ್ಯದಲ್ಲಿ ಪ್ರಸ್ತುತ ಶೇ.೨೨ರಷ್ಟು ಮಾತ್ರ ಮಳೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆ ಇದೆ.

Related Articles

Back to top button