Latest

*ಭಿನ್ನಾಭಿಪ್ರಾಯವಿದೆ ಆದರೆ….ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದೇಕೆ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಬೆನ್ನಲ್ಲೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹಾಗೂ ಮಾಜಿ ಡಿಸಿಎಂ, ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ, ಕುತೂಹಲಕ್ಕೆ ಕಾರಣವಾಗಿದೆ.

ಸುರ್ಜೇವಾಲ ಭೇಟಿ ವಿಚಾರವಾಗಿ ಮಾತನಾಡಿದ ಡಾ.ಜಿ.ಪರಮೇಶ್ವರ್, ಸುರ್ಜೇವಾಲಾ ಬಳಿ ಕೆಲವು ಮಹತ್ವದ ವಿಚಾರಗಳನ್ನು ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.

Related Articles

ನಾನು 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. 2 ಲೋಕಸಭಾ ಚುನಾವಣೆ ನಿರ್ವಹಿಸಿದ್ದೇನೆ. ಈ ಅನುಭವಗಳ ಆಧಾರಾದ ಮೇಲೆ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಕೆಲ ಮಹತ್ವದ ವಿಚಾರಗಳನ್ನು ಚರ್ಚೆ ಮಾಡಿದ್ದೇನೆ. ಕೆಲವು ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಅದನ್ನು ಅಸಮಾಧಾನ ಎನ್ನಲಾಗದು. ನನ್ನ ಅಭಿಪ್ರಾಯಗಳನ್ನು ಸುರ್ಜೇವಾಲಾ ಅವರ ಬಳಿ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ತಮಗೆ ಮಾಹಿತಿ ನೀಡದೇ ಒಂದೊಂದೇ ಪ್ರಣಾಳಿಕೆಗಳನ್ನು ಘೋಷಣೆ ಮಾಡುತ್ತಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ. ಒಟ್ಟಾರೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನದ ಕಿಡಿ ಆರಂಭವಾಗಿದೆಯೇ ಎಂಬ ಅನುಮಾನ ಶುರುವಾಗಿದೆ.

ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button